ಬೆಂಗಳೂರು: ಬೆಸ್ಕಾಂ ನಿರ್ಲಕ್ಷಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದ್ದ ಯುವಕನೊಬ್ಬನ ಶವ ರಾಜಕಾಲುವೆಯಲ್ಲಿ ಪತ್ತೆಯಾಗಿದೆ.
25 ವರ್ಷದ ಯುವಕ ಅಪ್ಪು ಎಂಬಾತ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆತನ ಶವ ಹಲಸೂರಿನ ಯಲ್ಲಮ್ಮ ಕೋಯಿಲ್ ಸ್ಟ್ರೀಟ್ ಬಳಿ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ಯುವಕನ ಸಾವಿಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.