alex Certify SHOCKING NEWS: ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಿಯಕರನೊಬ್ಬ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬಸವನಗರದಲ್ಲಿ ನಡೆದಿದೆ.

ರೇಣುಕಾ ಪಶ್ಚನ್ನವರ್ (28) ಹತ್ಯೆಯಾದ ಯುವತಿ. ರಾಮಚಂದ್ರ ತೇಣಗಿ ಪ್ರೇಯಸಿಯನ್ನೇ ಕೊಂದ ಯುವಕ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ರೇಣುಕಾ ಹಾಗೂ ರಾಮಚಂದ್ರ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ರೇಣುಕಾ ಯುವಕನನ್ನು ನಿರ್ಲಕ್ಷ್ಯ ಮಾಡಿದ್ದಳು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ಇಬ್ಬರ ನಡುವೆ ಮನಸ್ತಾಪ ವಿಕೋಪಕ್ಕೆ ತಿರುಗಿದ್ದು, ಕೋಪದ ಬರದಲ್ಲಿ ಯುವಕ ರಾಮಚಂದ್ರ ಯುವತಿಯ ರೂಮಿಗೆ ನುಗ್ಗಿ ಆಕೆಯ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...