ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಮಂಡಿಸಿದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಾರಿ ಮಾಡಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಳ ಮಾಡಲಾಗಿದೆ.
ಶ್ರಮಿಕರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು 2,000 ರೂ.ನಿಂದ 3000 ರೂ.ಗೆ ಏರಿಕೆ ಮಾಡಲಾಗಿದೆ. ಗೃಹ ಭಾಗ್ಯ ಸೌಲಭ್ಯದಡಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಲು 10 ಕಂತುಗಳಲ್ಲಿ ಧನ ಸಹಾಯ ಮಾಡಲು ನಿಯಮ ಸರಳೀಕರಣ ಮಾಡಲು ಒಪ್ಪಿಗೆ ನೀಡಲಾಗಿದೆ.
ಹೆರಿಗೆ ಸೌಲಭ್ಯ ಯೋಜನೆಯಡಿ ಹೆರಿಗೆ ಸಹಾಯಧನವನ್ನು 50,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಅಂತಿಮಸಂಸ್ಕಾರ ವೆಚ್ಚ ಯೋಜನೆಯಡಿ ನೀಡುತ್ತಿರುವ ಸಹಾಯಧನದ ಮೊತ್ತವನ್ನು 50,000 ರೂ. ನಿಂದ 71,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೊರೋನಾದಿಂದ ಫಲಾನುಭವಿ ಮೃತಪಟ್ಟ ಸಂದರ್ಭದಲ್ಲಿ ಅವಲಂಬಿತರಿಗೆ 2 ಲಕ್ಷ ರೂ. ಸಹಾಯಧನ ನೀಡಲಾಗುವುದು.