ಸಂಚಾರಿ ನಿಯಮ ಉಲ್ಲಂಘಿಸಿದವರಿಂದ ಟ್ರಾಫಿಕ್ ಪೇದೆ 200 ರೂಪಾಯಿ ಲಂಚ ಪಡೆದಿದ್ದು, ರಹಸ್ಯ ಕ್ಯಾಮರದಲ್ಲಿ ಸೆರೆಯಾದ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆತನನ್ನು ಸಸ್ಪೆಂಡ್ ಮಾಡಲಾಗಿದೆ.
ಇಂಥ ಒಂದು ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ ಪ್ರಾಂತ್ಯದಲ್ಲಿ ನಡೆದಿದ್ದು, ಲಂಚ ಪಡೆದಿದ್ದ ಪೇದೆಯನ್ನು ಸಸ್ಪೆಂಡ್ ಮಾಡುವುದರ ಜೊತೆಗೆ ತನಿಖೆಗೆ ಆದೇಶಿಸಲಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು, ಮೊದಲು ಕೋಟಿಗಟ್ಟಲೆ ಲಂಚ ಪಡೆಯುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸುತ್ತಿದ್ದಾರೆ.