ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಜನರ ಪೈಕಿ ಒಬ್ಬ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ದೌರ್ಜನ್ಯ ನಡೆಸಿದ ಮತ್ತು ದೌರ್ಜನ್ಯಕ್ಕೆ ಒಳಗಾದ ಎಲ್ಲರೂ ಅಪರಾಪ್ತ ವಿದ್ಯಾರ್ಥಿಗಳಾಗಿದ್ದಾರೆ.
8 ವಿದ್ಯಾರ್ಥಿಗಳ ವಿರುದ್ಧ ಪೋಸ್ಕೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಪೊಲೀಸರು ಪೋಸ್ಕೋ ಮತ್ತು ಐಟಿ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾವುಟಗುಡ್ಡೆಯ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿತ್ತು.