ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ, ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಚಿವ ಪಾರ್ಥ ಚಟರ್ಜಿ ಹೆಸರು ಕೇಳಿಬಂದಿತ್ತು. ಅಲ್ಲದೇ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ ಕಟ್ಟಡದ ಮೇಲೆ ನಡೆದ ಇಡಿ ದಾಳಿಯಲ್ಲಿ ಬರೋಬ್ಬರಿ 20 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಈ ಹಣವನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಈ ದಾಳಿ ಬೆನ್ನಲ್ಲೇ ಇಡಿ ಅಧಿಕಾರಿಗಳು ಸಚಿವ ಪಾರ್ಥ ಚಟರ್ಜಿ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಇಡಿ ಅಧಿಕಾರಿಗಳು ಸಚಿವರನ್ನು ಬಂಧಿಸಿದ್ದಾರೆ.