ಕೊಲ್ಕೊತ್ತಾ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಹಾಗೂ ನಟಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಲಾಗಿದೆ.
ಅರ್ಪಿತಾ ಮುಖರ್ಜಿ ನಿವಾಸದಲ್ಲಿ ನಿನ್ನೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ 20 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರಿಸಲಾಗಿದೆ. ನಿನ್ನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು 20 ಕೋಟಿ ನಗದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಇಂದು ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಿದ್ದಾರೆ.