ರಾಷ್ಟ್ರಧ್ವಜ ಹಾರಾಟ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದಾಗಿದೆ. ಅಲ್ಲದೆ ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನೂ ಇದಕ್ಕಾಗಿ ಬಳಸಬಹುದಾಗಿದೆ.
ಈ ಮೊದಲು ರಾಷ್ಟ್ರಧ್ವಜವನ್ನು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಮಾತ್ರ ಹಾರಿಸಬಹುದಾಗಿತ್ತು. ಜೊತೆಗೆ ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನು ಬಳಕೆ ಮಾಡಲು ಅನುಮತಿ ಇರಲಿಲ್ಲ.
‘ಆಜಾದಿ ಕಾ ಅಮೃತ ಮಹೋತ್ಸವ’ ದ ಅಂಗವಾಗಿ ಆಗಸ್ಟ್ 13 ರಿಂದ 15 ರ ವರೆಗೆ ದೇಶದ ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.