ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಎನ್ ಡಿ ಎ ಎಂದರೆ ‘ನೋ ಡೇಟಾ ಅವೈಲಬಲ್’ ಎಂದು ವ್ಯಂಗ್ಯವಾಡಿದ್ದಾರೆ.
ಏನೇ ಪ್ರಶ್ನೆ ಕೇಳಿದರೂ ಈ ಸರ್ಕಾರದ ಬಳಿ ಯಾವುದಕ್ಕೂ ಉತ್ತರವಿರುವುದಿಲ್ಲ. ಹಾಗಾಗಿ ಇದು ‘ನೋ ಡೇಟಾ ಅವೈಲಬಲ್’ ಸರ್ಕಾರ ಎಂದು ರಾಹುಲ್ ಗಾಂಧಿ ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅವರು, ಕೊರೊನಾ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಯಾರೂ ಸತ್ತಿಲ್ಲ. ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲೂ ಯಾರೂ ಮೃತಪಟ್ಟಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.