ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ವಿಪಕ್ಷ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಪೈಪೋಟಿ ಆರಂಭವಾಗಿದೆ. ಈ ನಡುವೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಹಸ್ಯೆ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಪರಮೇಶ್ವರ್ ಹಾಗೂ ಖರ್ಗೆ ಮಹತ್ವದ ಸಭೆ ನಡೆಸಿದ್ದಾರೆ. ಖರ್ಗೆ ಹುಟ್ಟುಹಬ್ಬಕ್ಕೆ ಶುಭಕೋರುವ ನೆಪದಲ್ಲಿ ಆಗಮಿಸಿದ ಜಿ.ಪರಮೇಶ್ವರ್, ಬಳಿಕ ಬಾಗಿಲು ಹಾಕಿಕೊಂಡು ಇಬ್ಬರು ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.
ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ್ ಮಹತ್ವದ ಮಾತುಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.