alex Certify ಜನಸಾಮಾನ್ಯರಿಗೆ ಸಿಹಿ ಸುದ್ದಿ: ಅತ್ಯವಶ್ಯಕ ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಸಿಹಿ ಸುದ್ದಿ: ಅತ್ಯವಶ್ಯಕ ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜನಸಾಮಾನ್ಯರು ಹೆಚ್ಚಾಗಿ ಬಳಸುವ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆಗಸ್ಟ್ 15 ರಿಂದ ಮಧುಮೇಹ, ಹೃದಯ ಸಂಬಂಧಿ ರೋಗಗಳು, ಕ್ಯಾನ್ಸರ್ ಮೊದಲಾದವುಗಳ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

ಕೇಂದ್ರ ರಸಾಯನಿಕ ಇಲಾಖೆ ಈ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದಂದು ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆ ಇದೆ. ಕೆಲವು ಅಗತ್ಯ ಔಷಧಿಗಳ ಬೆಲೆ ಶೇಕಡ 70ರ ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ಈ ಕುರಿತಾಗಿ ಚರ್ಚಿಸಲು ಔಷಧ ಉದ್ಯಮದ ಪ್ರತಿನಿಧಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಜುಲೈ 26ರಂದು ಸಭೆ ನಡೆಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...