ರಾಜ್ಯ ಸರ್ಕಾರ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 2022 – 23ನೇ ಸಾಲಿನಲ್ಲಿ 5,159 ಅತಿಥಿ ಶಿಕ್ಷಕರ ನೇಮಕಾತಿಗೆ ಮುಂದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 26 ಕೊನೆ ದಿನವಾಗಿದ್ದು, ಆಯ್ಕೆಯಾದ ಅತಿಥಿ ಶಿಕ್ಷಕರಿಗೆ 10,500 ರೂಪಾಯಿ ಗೌರವಧನವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ schooleducation.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ವಿವರ ಪಡೆಯಬಹುದಾಗಿದೆ.