ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂಡಿಯನ್ ನೆವಿ ಅಗ್ನಿವೀರ್ ಎಂಆರ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ದೊರೆತಿದೆ.
ಒಟ್ಟು 200 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ 10ನೇ ತರಗತಿ ಪಾಸ್ ಆಗಿರಬೇಕು. ಪುರುಷ ಹಾಗೂ ಮಹಿಳೆ ಇಬ್ಬರೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜುಲೈ 30. ಅಭ್ಯರ್ಥಿಗಳ ವಯೋಮಿತಿ ಡಿಸೆಂಬರ್ 1, 1999 ರಿಂದ ಮೇ 31, 2000 ನಡುವೆ ಇರಬೇಕು. ಆಯ್ಕೆಯಾದ ಅಗ್ನಿವೀರರಿಗೆ 30,000 ವೇತನ ಇರಲಿದೆ.
ಆಸಕ್ತ ಅಭ್ಯರ್ಥಿಗಳು joinindiannavy.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.