ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಗತ್ಯವಾಗಿ ಇಡಿ ವಿಚಾರಣೆಗೆ ಒಳಪಡಿಸುವುದನ್ನು ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದಿಂದ ಇಂದು ಬೃಹತ್ ಮೌನ ಪ್ರತಿಭಟನೆ ಕೈಗೊಳ್ಳಲಾಗಿದೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ಕೈಗೊಳ್ಳಲಾಗಿದ್ದು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಸೋನಿಯಾ ಗಾಂಧಿಯವರ ಇಡಿ ವಿಚಾರಣೆ ಮುಗಿಯುವವರೆಗೆ ಮೌನ ಸತ್ಯಾಗ್ರಹ ನಡೆಸಲಾಗುವುದು. ಪಕ್ಷ ನಾಯಕರು, ಮುಖಂಡರು, ಪದಾಧಿಕಾರಿಗಳು ಭಾಗವಹಿಸುವಂತೆ ತಿಳಿಸಲಾಗಿದೆ.