ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಮುಂದೂಡಿದೆ.
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತು. ಈ ಹಿನ್ನೆಲೆಯಲ್ಲಿ ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಕರ್ನಾಟಕ ಪರ ವಕೀಲ ಶಾಮ್ ದಿವಾನ್ ವಾದ ಮಂಡಿಸಿದ್ದಾರೆ. ಅಲ್ಲದೆ ಅರ್ಜಿಯ ಅಂತಿಮ ವಿಚಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮೇಕೆದಾಟು ಅರ್ಜಿ ವಿಚಾರಣೆ ಹಂತದಲ್ಲಿದ್ದು, ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಸಧ್ಯಕ್ಕೆ ಚರ್ಚೆಯಾಗಬಾರದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆಗಸ್ಟ್ 10ಕ್ಕೆ ಮುಂದೂಡಿದೆ.