ಇತ್ತೀಚೆಗಷ್ಟೇ ಅಮೆರಿಕದಲ್ಲಿ ನಡೆದ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ ಬಿದ್ದಿದ್ದಾರೆ.
ನೀರಜ್ ಚೋಪ್ರಾ ಅವರ ನಿರ್ಗಮನದಿಂದಾಗಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬಂಗಾರದ ಪದಕ ಗಳಿಸಿಕೊಡಬಹುದೆಂಬ ನಿರೀಕ್ಷೆ ಈಗ ಕಮರಿ ಹೋಗಿದೆ.
ನೀರಜ್ ಚೋಪ್ರಾ ಗಾಯಗೊಂಡಿರುವ ಕಾರಣ ವೈದ್ಯರು ಅವರಿಗೆ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.