ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 28 ರಂದು ವೀಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ.
‘ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕ -ಇದು ನಮ್ಮ ಸಂಕಲ್ಪ’ ಘೋಷಣೆಯಡಿ ಮಿನಿ ಬಜೆಟ್ ಮಾದರಿಯಲ್ಲಿ ಹೊಸ ಜನಪರ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಮುಖವಾಗಿ ಕಂದಾಯ, ಆರೋಗ್ಯ, ಶಿಕ್ಷಣ, ಹಿಂದುಳಿದ ವರ್ಗ, ನಗರಾಭಿವೃದ್ಧಿ, ಪಶುಸಂಗೋಪನೆ ಮತ್ತು ಜಲ ಸಂಪನ್ಮೂಲ ಇಲಾಖೆಗಳಿಗೆ ಸಂಬಂಧಿಸಿದಂತೆ ಹೊಸ ಜನಪ್ರಿಯ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಮತ್ತು ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಲ್ಲದೇ ವಿಧಾನಸಭೆ ಚುನಾವಣೆ ಕೂಡ ಸಮೀಪಿಸುತ್ತಿರುವುದರಿಂದ ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಹೆಸರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಿನಿ ಬಜೆಟ್ ಮಾದರಿಯಲ್ಲಿ ವಿವಿಧ ಜನಪರ ಯೋಜನೆಗಳನ್ನು ಸಿಎಂ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.