ಪಶ್ಚಿಮ ಬಂಗಾಳದ ಶಾಲಾ ನೇಮಕಾತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.
ಮಮತಾ ಸರ್ಕಾರದಲ್ಲಿ ಪ್ರಸ್ತುತ ಕೈಗಾರಿಕಾ ಸಚಿವರಾಗಿರುವ ಪಾರ್ಥ ಚಟರ್ಜಿ, ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಕರ ನೇಮಕಾತಿ ವೇಳೆ ಅಕ್ರಮವಾಗಿ ಹಣ ಪಡೆದಿದ್ದ ಆರೋಪ ಕೇಳಿ ಬಂದಿತ್ತು.
ಇತ್ತೀಚೆಗೆ ಪಾರ್ಥ ಚಟರ್ಜಿ ಆಪ್ತೆ ನಟಿ ಅರ್ಪಿತ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 20 ಕೋಟಿ ರೂಪಾಯಿಗಳ ನಗದು ಪತ್ತೆಯಾಗಿತ್ತು. ಬಳಿಕ ಪಾರ್ಥ ಚಟರ್ಜಿಯನ್ನೂ ಸಹ ಬಂಧಿಸಲಾಗಿತ್ತು. ಇದೀಗ ಮಮತಾ ಬ್ಯಾನರ್ಜಿ, ಪಾರ್ಥ ಚಟರ್ಜಿಯನ್ನು ತಮ್ಮ ಸಂಪುಟದಿಂದ ಕೈ ಬಿಟ್ಟಿದ್ದಾರೆ.