ಬೆಂಗಳೂರು: ರೈತರ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು, ನೇಕಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರೈತರ ಮಕ್ಕಳಿಗೆ ನೀಡುತ್ತಿರುವ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆಯನ್ನು ಟ್ಯಾಕ್ಸಿ ಚಾಲಕರು, ಮೀನುಗಾರರು ಮತ್ತು ನೇಕಾರರ ಮಕ್ಕಳಿಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಲ್ಲಿ ರಾಜ್ಯದ ಸುಮಾರು 28,000 ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ ಯುವಕರಿಗೆ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಿದ್ದು, ಇದರಿಂದ 5 ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.