ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ಗೆ ಅದ್ದೂರಿ ಚಾಲನೆ ಸಿಕ್ಕಿದೆ. ಕಳೆದ ರಾತ್ರಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಈ ಕ್ರೀಡಾ ಹಬ್ಬಕ್ಕೆ ಮುನ್ನುಡಿ ಬರೆಯಲಾಗಿದೆ. ವಿಶ್ವದ 72 ರಾಷ್ಟ್ರಗಳಿಂದ ಆಗಮಿಸಿರುವ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಿಗೆ ತಯಾರಿ ನಡೆಸಿದ್ದಾರೆ.
ಗುರುವಾರ ರಾತ್ರಿ ನಡೆದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕ್ರೀಡಾಪಟುಗಳ ಪಥ ಸಂಚಲನದಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಣಿಯಾಗಿದ್ದರು. ಈ ಕ್ರೀಡಾಕೂಟದಲ್ಲಿ ನೂರಕ್ಕೂ ಅಧಿಕ ಪದಕಗಳನ್ನು ಗೆಲ್ಲುವ ಹುಮ್ಮಸ್ಸಿನಲ್ಲಿ ಭಾರತೀಯ ಕ್ರೀಡಾಪಟುಗಳಿದ್ದಾರೆ.
ಕಾಮನ್ವೆಲ್ತ್ ಕ್ರೀಡಾಕೂಟದ ಮೊದಲ ದಿನವಾದ ಇಂದು ಟಿ20 ಕ್ರಿಕೆಟ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಟೇಬಲ್ ಟೆನಿಸ್, ಹಾಕಿ ಮತ್ತು ಸ್ಕ್ವಾಷ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಇಂದು ಒಟ್ಟು 16 ಸ್ವರ್ಣ ಪದಕಗಳು ಪಣಕ್ಕಿದ್ದು, ಯಾರ ಮುಡಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.