ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 29, 30 ರಂದು ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜುಲೈ 29 ರಂದು ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 30 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.