ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ನಿಮಿತ್ತ ಆಗಸ್ಟ್ 10ರಂದು ಎಲ್ಲಾ ಶಾಲಾ – ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉಚಿತ ಜಂತುಹುಳು ನಾಶಕ ಮಾತ್ರೆಗಳನ್ನು ವಿತರಿಸಲಾಗುತ್ತದೆ.
ಜಂತು ಹುಳು ಸೋಂಕಿನಿಂದ ಮಕ್ಕಳು ರಕ್ತ ಹೀನತೆ, ಪೌಷ್ಟಿಕಾಂಶದ ಕೊರತೆ, ನಿಶ್ಯಕ್ತಿ, ಹಸಿವಾಗದಿರುವುದು, ಏಕಾಗ್ರತೆ ಕೊರತೆ, ಹೊಟ್ಟೆ ನೋವು, ವಾಕರಿಕೆ, ವಾಂತಿ, ಆತಂಕ, ಅತಿಸಾರ ಮೊದಲಾದ ಸಮಸ್ಯೆಗಳಿಂದ ಬಳಲುತ್ತಾರೆ.
ಈ ಹಿನ್ನಲೆಯಲ್ಲಿ ಈ ಸಮಸ್ಯೆಯಿಂದ ಹೊರಬರುವ ಸಲುವಾಗಿ ಪ್ರತಿವರ್ಷ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಿಸಲಾಗುತ್ತಿದ್ದು, ಅಂದು ಅಲ್ಪೆಂಡಝೋಲ್ ಮಾತ್ರೆಯನ್ನು ಮಕ್ಕಳಿಗೆ ಉಚಿತವಾಗಿ ವಿತರಿಸಲಾಗುತ್ತದೆ.