ಬೆಂಗಳೂರು: ಬಿಜೆಪಿ ಯುವ ಮುಖಂಡನ ಹತ್ಯೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂಬ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಕಲ್ಲು, ಹೂ ಹಿಡಿದು ಬಂದು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಸಂಸದರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.
ಮತ್ತೊಂದೆಡೆ ಸಂಸದರ ಮನೆಗೆ ಹೂ ಹಿಡಿದು ಬಂದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಸಂಸದ ತೇಜಸ್ವಿ ಸೂರ್ಯ ಅವರ ನಿವಾಸ ಹಾಗೂ ಕಚೇರಿಗೆ ಪೊಲಿಸ್ ಭದ್ರತೆ ಕಲ್ಪಿಸಲಾಗಿದೆ.