ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, 2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ಬಾರಿ ಸಿಇಟಿಯಲ್ಲಿ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಎಂಜಿನಿಯರಿಂಗ್ ನಲ್ಲಿ ಯಲಹಂಕ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಅಪೂರ್ವ್ ತಂಡೋನ್ 97% ಪಡೆದು ಪ್ರಥಮ ರ್ಯಾಂಕ್ ಬಂದಿದ್ದಾರೆ.
ಮಾರತ್ತಹಳ್ಳಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವಿದ್ಯಾರ್ಥಿ ಸಿದ್ಧಾರ್ಥ್ ಸಿಂಗ್ ಶೇ.96 ಅಂಕಗಳೊಂದಿಗೆ ದ್ವೀತೀಯ ಹಾಗೂ ಆತ್ಮಕುರಿ ವೆಂಕಟ ತೃತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ.
ನ್ಯಾಚುರೋಪತಿ ಹಾಗೂ ಯೋಗದಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸ್ಲೆನ್ಸ್ ಹೃಷಿಕೇಶ್ 98% ಪ್ರಥಮ ರ್ಯಾಂಕ್ ಪಡೆದರೆ ಉಡುಪಿಯ ಮಾದವ ಕೃಪ ಇಂಗ್ಲೀಷ್ ಸ್ಕೂಲ್ ವಿದ್ಯಾರ್ಥಿ ವ್ರಜೇಶ್ 96% ದೊಂದಿಗೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ನ ಕೃಷ್ಣ 96% ದೊಂದಿಗೆ ತೃತೀಯ ರ್ಯಾಂಕ್ ಪಡೆದಿದ್ದಾರೆ.
Kea.kar.nic.in ಹಾಗೂ karesults.nic.in ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು.