ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗಳ ನಡುವೆಯೇ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಶಾಸಕ ಜಮೀರ್ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಕರಾವಳಿ ಭಾಗದ ಯುವಕರ ಸರಣಿ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಮಾಡಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಶಾಸಕ ಜಮೀರ್ ಅಹ್ಮದ್ ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಕೊಲೆ ಪ್ರಕರಣ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿಗೆ ಜಮೀರ್ ಅಹ್ಮದ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆಯೇ ಅಥವಾ ರಾಜಕೀಯ ಕಾರಣಗಳಿಗಾಗಿ ಭೇಟಿಯಾಗಿದ್ದಾರಾ ಎಂಬ ಕುತೂಹಲ ಮೂಡಿದೆ.