ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಗೃಹ ಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಎಬಿವಿಪಿಯ ಓರ್ವ ಮಹಿಳಾ ಕಾರ್ಯಕರ್ತೆ ಸೇರಿದಂತೆ 30 ಕಾರ್ಯಕರ್ತರ ವಿರುದ್ಧ ಜೆ.ಸಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 448, 143, 147, 149ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಕಲಂ 3 ಆಫ್ PDPP ಆಕ್ಟ್ ಅಡಿಯಲ್ಲಿಯೂ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.