ನವದೆಹಲಿ: ಡಿ ಹೆಚ್ ಎಫ್ ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಅನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.
ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅವಿನಾಶ್ ಭೋಸಲೆ ಕಚೇರಿ, ಮನೆ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಅವರಿಗೆ ಸೇರಿದ ಆಸ್ತಿ, ಪ್ರಮುಖವಾಗಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ನ್ನು ವಶಕ್ಕೆ ಪಡೆದಿದ್ದಾರೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್ ಗಳ ಒಕ್ಕೂಟಕ್ಕೆ ಡಿ ಹೆಚ್ ಎಫ್ ಎಲ್ ನ ಬೋಗಸ್ ಲೆಡ್ಜರ್ ಗಳಲ್ಲಿ 34,615 ಕೋಟಿ ಬ್ಯಾಂಕ್ ಸಾಲಗಳನ್ನು ನೀಡುವ ಮೂಲಕ ವಂಚಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.