ಮಡಿಕೇರಿ: ರಾಜ್ಯದಲ್ಲಿ ಮಂಕಿಪಾಕ್ಸ್ ಭೀತಿ ನಡುವೆಯೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ವೈದ್ಯಕೀಯ ಕಾಲೇಜೊಂದರಲ್ಲಿ 46 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಮತ್ತೆ ಸಾಂಕ್ರಾಮಿಕ ರೋಗಗಳ ಆತಂಕ ಶುರುವಾಗಿದ್ದು, ಜಿಲ್ಲೆ ಜಿಲ್ಲೆಗಳಲ್ಲೂ ಕೋವಿಡ್ ಕೇಸ್ ಉಲ್ಬಣಗೊಳ್ಳುತ್ತಿದೆ. ಮಡಿಕೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಳೆ, ಭೂಕುಸಿತದಿಂದ ತಲ್ಲಣಿಸಿರುವ ಕೊಡಗು ಜಿಲ್ಲೆಯ ಜನರು ಇದೀಗ ಕೋವಿಡ್ ಗೆ ಬೆಚ್ಚಿ ಬೀಳುವಂತಾಗಿದೆ.
46 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಆದರೆ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡೀನ್ ಕಳ್ಳಿಚಂಡ ಕಾರ್ಯಪ್ಪ ತಿಳಿಸಿದ್ದಾರೆ.