ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ನಾಲ್ಕನೇ ಮಗಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಎನ್.ಟಿ.ಆರ್. ಅವರ ಮಗಳು ಉಮಾ ಮಹೇಶ್ವರಿ ಅವರ ಮೃತದೇಹ ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ಮನೆಯಲ್ಲಿ ಪತ್ತೆಯಾಗಿದೆ.
ಕೆಲ ದಿನಗಳಿಂದ ಉಮಾ ಮಹೇಶ್ವರಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತನಿಖೆ ಬಳಿಕವೇ ಸತ್ಯಾಸತ್ಯತೆ ತಿಳಿಯಬೇಕಿದೆ.