ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಿಸಲಾಗಿದೆ. ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ನಡೆಯುವ ಪೂರಕ ಪರೀಕ್ಷೆಗೆ ದಂಡ ಶುಲ್ಕದೊಂದಿಗೆ ಪರೀಕ್ಷೆ ಶುಲ್ಕವನ್ನು ಪಾವತಿಸಲು ಆಗಸ್ಟ್ 4ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಕಾಲೇಜುಗಳ ಪ್ರಾಂಶುಪಾಲರು ಆಗಸ್ಟ್ 5ರೊಳಗೆ ಶುಲ್ಕ ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು. ಜೊತೆಗೆ ಕೆ2 ಚಲನ್ ಮೂಲಕ ಖಜಾನೆಗೆ ಶುಲ್ಕ ಸಂದಾಯ ಮಾಡಿ ವಿದ್ಯಾರ್ಥಿಗಳ ಪರೀಕ್ಷಾ ಅರ್ಜಿ, ಚೆಕ್ ಲಿಸ್ಟ್, ಚಲನ್ ಗಳನ್ನು ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸಲ್ಲಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ತಿಳಿಸಲಾಗಿದೆ.