ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.