alex Certify BIG NEWS: ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ: ಸಚಿವ ಸುನಿಲ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ: ಸಚಿವ ಸುನಿಲ್ ಕುಮಾರ್

ಹುಬ್ಬಳ್ಳಿ: ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಯ್ಡ್(ಮುಂಚಿತವಾಗಿ ಪಾವತಿಸಿದ) ಮೀಟರ್  ಅಳವಡಿಸಲು ಕ್ರಮವಹಿಸಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ನಲ್ಲಿ ಹೆಸ್ಕಾಂ ವತಿಯಿಂದ ಆಯೋಜಿಸಲಾಗಿದ್ದ ಹೊಸದಾಗಿ ನೇಮಕಗೊಂಡು, ತರಬೇತಿ ಪಡೆಯುತ್ತಿರುವ ಕಿರಿಯ ಪವರ್ ಮ್ಯಾನ್‌ಗಳಿಗೆ ಶುಭ ಹಾರೈಸಿದ  ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು,

ಸರ್ಕಾರಿ ಕಚೇರಿಗಳಲ್ಲಿ   ಬಾಕಿ ಇರುವ ವಿದ್ಯುತ್ ಬಿಲ್ ಸಂಗ್ರಹಕ್ಕೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಯ್ಡ್ ಮೀಟರ್ ಗಳನ್ನು ಅಳವಡಿಸಲು ಆಲೋಚಿಸಲಾಗಿದೆ‌. ಈಗಾಗಲೇ 1008 ಕಡೆಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೇಡಿಕೆಗೆ ಅನುಗುಣವಾಗಿ ಒಂದು ವರ್ಷದ ಅವಧಿಯಲ್ಲಿ ಹೊಸದಾಗಿ 37 ಕಡೆಗಳಲ್ಲಿ ವಿದ್ಯುತ್  ಸಬ್ ಸ್ಟೇಷನ್‌ಗಳನ್ನು ನಿರ್ಮಿಸಲಾಗುವುದು.  ಗ್ರಾಹಕರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡಬೇಕು ಎಂದರು.

ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಭಾರತಿ ಡಿ ಮಾತನಾಡಿ, ಪವರ್ ಮ್ಯಾನ್ ಗಳು ಉತ್ತಮ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಿಸಬೇಕು,ಸುರಕ್ಷತೆ ಮತ್ತು ಶ್ರದ್ಧೆಗೆ ಆದ್ಯತೆ ನೀಡಬೇಕು ಎಂದರು.

ಕೆಪಿಟಿಸಿಎಲ್ ತಾಂತ್ರಿಕ ನಿರ್ದೇಶಕ ಚಂದ್ರಶೇಖರ,ಹೆಸ್ಕಾಂ ನಿರ್ದೇಶಕರಾದ ಪ್ರಕಾಶ ಪಾಟೀಲ, ಮಹೇಶ ಗುಬ್ಬಿ, ಹೆಸ್ಕಾಂ ಮುಖ್ಯ ಇಂಜಿನಿಯರ್ ರಮೇಶ ಬೆಂಡಿಗೇರಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ವಿನಾಯಕ ಪಾಲನಕರ್, ಮುಖ್ಯ ವಿದ್ಯುತ್ ಪರೀವಿಕ್ಷಕ ವೆಂಕಟರೆಡ್ಡಿ , ಕವಿಪ್ರನಿನಿ ಅಧೀಕ್ಷಕ ವಿರೇಶಕುಮಾರ ಹೆಬ್ಬಾಳ, ಹೆಸ್ಕಾಂ ನ ತಾಂತ್ರಿಕ ಪ್ರಧಾನ ವ್ಯವಸ್ಥಾಪಕ ಜಗದೀಶ ಬೆಳಗಲಿ, ದೇಶಪಾಂಡೆ ಫೌಂಡೇಷನ್ನಿನ ಸಿಇಓ ಪಿ.ಎನ್‌‌.ನಾಯಕ ಇತರರು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...