‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು ದಾವಣಗೆರೆಯತ್ತ ಧಾವಿಸುತ್ತಿದ್ದು, ದಾವಣಗೆರೆ ನಗರ ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ವೇದಿಕೆ ಸಜ್ಜಾಗಿದೆ.
ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತಂಡ ಇದನ್ನು ನಡೆಸಿಕೊಡಲಿದೆ. ಮಧ್ಯಾಹ್ನ 12ಕ್ಕೆ ಅಮೃತ ಮಹೋತ್ಸವ ಕಾರ್ಯಕ್ರಮ ಶುರುವಾಗಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವೇ ಕೆಲವು ಗಣ್ಯರು ಮಾತನಾಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಮುಕ್ತಾಯಗೊಳಿಸಲು ಆಯೋಜಕರು ಚಿಂತನೆ ನಡೆಸಿದ್ದು, ಇದರ ಮಧ್ಯೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯೂ ಒಂದಷ್ಟು ಆತಂಕ ಮೂಡಿಸಿದ.