ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡಲು ನೀವು ಮುಂದಾಗಿದ್ದರೆ ಈ ಸುದ್ದಿ ಓದಲೇಬೇಕು. ಅನಧಿಕೃತ ಕಟ್ಟಡಗಳ ನಿರ್ಮಾಣವಾಗದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದ್ದು, ಸಚಿವ ಸಿ.ಸಿ. ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ.
ನಿಯಮದನ್ವಯ ರಾಜ್ಯ ಹೆದ್ದಾರಿಗಳ ಮಧ್ಯ ಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಜೊತೆಗೆ ಜಿಲ್ಲಾ ಮುಖ್ಯ ರಸ್ತೆಗಳ ಮಧ್ಯ ಭಾಗದಿಂದ 25 ಮೀಟರ್ ಹಂತದವರೆಗೆ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅವಕಾಶವಿರುವುದಿಲ್ಲ.
ಸುಗಮ ರಸ್ತೆ ಸಂಚಾರಕ್ಕಾಗಿ ಹಾಗೂ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಈ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.