ದಾವಣಗೆರೆಯಲ್ಲಿ ಇಂದು ನಡೆಯುತ್ತಿರುವ ಸಿದ್ದರಾಮಯ್ಯ 75 ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಿತ್ರದುರ್ಗಕ್ಕೆ ತೆರಳಿ ಮುರುಘಾ ಶ್ರೀಗಳನ್ನು ಭೇಟಿಯಾಗಿ ದಾವಣಗೆರೆಗೆ ಬರುವ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ್ದಾರೆ.
ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದು ಹೀಗಾಗಿ ದಾವಣಗೆರೆ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ.
ಹೀಗಾಗಿ ರಾಹುಲ್ ಗಾಂಧಿಯವರು ಬರುವ ವೇಳೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಳಿಕ ಪೊಲೀಸರು ಅವರ ವಾಹನ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ. ಇದೀಗ ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆಯಲ್ಲಿ ಪಾಲ್ಗೊಂಡಿದ್ದಾರೆ.