ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ 75 – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತರೂಢ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಪ್ರವೀಣ್ ಮನೆಗೆ ಭೇಟಿ ನೀಡಿ ನೀವು ಪರಿಹಾರ ನೀಡಿರುವುದು ಸರಿ ಇದೆ. ಹಾಗೆಯೇ ಹತ್ಯೆಗೀಡಾದ ಮಸೂದ್ ಹಾಗೂ ಫಾಸಿಲ್ ಅವರ ಮನೆಗೂ ಭೇಟಿ ನೀಡಬೇಕಲ್ಲವೇ ಎಂದು ಕೇಳಿದ್ದಾರೆ.
ಬೊಮ್ಮಾಯಿ ಅವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸಂವಿಧಾನ ಬದ್ಧವಾಗಿ ನಿಮಗೆ ಆಡಳಿತ ನಡೆಸಲು ಬರುವುದಿಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿ ಕಾರಿದ್ದಾರೆ.