ಬೆಂಗಳೂರು: ಜೆಡಿಎಸ್ ರಾಜ್ಯಮಟ್ಟದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರೊಂದಿಗೆ ರಾಜ್ಯಾಧ್ಯಕ್ಷರಾಗಿರುವ ಇಬ್ರಾಹಿಂ ಅವರ ನೇಮಕವನ್ನು ಸಾಂಸ್ಥಿಕ ಚುನಾವಣೆಯ ಮೂಲಕ ದೃಢೀಕರಿಸಿದಂತಾಗಿದೆ. ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದಾರೆ.
ರಾಜ್ಯ ಸಾಂಸ್ಥಿಕ ಚುನಾವಣೆ ಅಧಿಕಾರಿಯಾಗಿ ಪಕ್ಷದ ನಾಯಕ ಹೆಚ್.ಸಿ. ನೀರಾವರಿ ನಿಯಮ ಬದ್ಧವಾಗಿ ಚುನಾವಣೆ ನಡೆಸಿದ್ದಾರೆ ಅವರಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.