ಮಂಗಳವಾರದಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಇದನ್ನು ಆಯೋಜಿಸಿದ್ದು, ಇದಕ್ಕೆ ಜನಸಾಗರವೇ ಹರಿದು ಬಂದಿದೆ.
ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ದ ಸಿದ್ದರಾಮಯ್ಯ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೂ ನಮನ ಸಲ್ಲಿಸಲಾಗಿದೆ.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸ್ಯಾಂಡಲ್ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಸಾಧುಕೋಕಿಲ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ‘ಬೊಂಬೆ ಹೇಳುತೈತೆ’ ಹಾಡು ಬಂದಾಗ ಅಪ್ಪು ಅಪ್ಪು ಎಂದು ಕೂಗುವ ಮೂಲಕ ನೆರೆದಿದ್ದ ಜನಸಾಗರ ಪುನೀತ್ ರಾಜಕುಮಾರ್ ಅವರಿಗೆ ಜೈಕಾರ ಹಾಕಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರೂ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಪುನೀತ್ ಅವರಿಗೆ ನಮನ ಸಲ್ಲಿಸಿ ಎಂದ ವೇಳೆ ಲಕ್ಷಾಂತರ ಮಂದಿ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ನಮನ ಸಲ್ಲಿಸಿದ್ದಾರೆ.