ಮುಂಬೈ: ಹಣದುಬ್ಬರದ ನಡುವೆಯೇ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ್ ದಾಸ್, ರೆಪೊ ದರವನ್ನು ಸತತ ಮೂರನೇ ಬಾರಿಗೆ ಏರಿಕೆ ಮಾಡಲಾಗಿದ್ದು, 50 ಮೂಲಾಂಶದಷ್ಟು (50bps) ಹೆಚ್ಚಿಸಲಾಗಿದೆ. ಈ ಮೂಲಕ ರೆಪೊ ದರ ಶೇ.5.4ರಷ್ಟಾಗಿದೆ. ಇಂದಿನಿಂದಲೇ ಈ ದರ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಣದುಬ್ಬರ ಪ್ರಮಾಣ ಹೆಚ್ಚಗೈರುವುದರಿಂದ ರೆಪೊ ರೇಟ್ ಹೆಚ್ಚಳ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ ಬಡ್ಡಿ ದರ ಹೆಚ್ಚಾಗಲಿದೆ.