ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಸಂಭವಿಸಿದ್ದು, ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಂಧನೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಬರುತ್ತಿದ್ದಂತೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ.
8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.