ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದರ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.
ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಧ್ವಜ ಹಾರಿಸುವ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.