ಸ್ವಾತಂತ್ರ ದಿನೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರೆ ನೀಡಿದ್ದು ಇದಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರು, ಸ್ವಯಂ ಪ್ರೇರಿತವಾಗಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಸಿದ್ಧತೆ ನಡೆಸಿದ್ದಾರೆ.
ಇದರ ಮಧ್ಯೆ ದೇಶದ ಹೆಮ್ಮೆಯ ಸಂಸ್ಥೆಯಾದ ಇಸ್ರೋ, ಬಾಹ್ಯಾಕಾಶದಲ್ಲೂ ತ್ರಿವರ್ಣ ಧ್ವಜ ಹಾರಿಸಲು ಯೋಜನೆ ರೂಪಿಸಿದ್ದು, ಈ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಮತ್ತಷ್ಟು ಸ್ಮರಣೀಯವಾಗಲಿದೆ.
ಆಗಸ್ಟ್ 7ರ ಭಾನುವಾರದಂದು ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 9:18ಕ್ಕೆ ಎಸ್ ಎಸ್ ಎಲ್ ವಿ ರಾಕೆಟ್ ನಭಕ್ಕೆ ಚಿಮ್ಮಲಿದ್ದು, ಈ ಮೂಲಕ ಬಾಹ್ಯಾಕಾಶದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಲಿದೆ.