ನವದೆಹಲಿ: 1.50 ಲಕ್ಷ ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಈ ವರ್ಷದ ಡಿಸೆಂಬರ್ ವೇಳೆಗೆ ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ನಿನ್ನೆ ರಾಜ್ಯಸಭೆಯಲ್ಲಿ ಆರೋಗ್ಯ ಹಕ್ಕು ಮಸೂದೆ 2021 ರ ಖಾಸಗಿ ಸದಸ್ಯರ ಶಾಸನದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 1.50 ಲಕ್ಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವ ಒಟ್ಟು ಗುರಿಯಲ್ಲಿ 1.22 ಲಕ್ಷ ಕೇಂದ್ರಗಳು ಈಗ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಈ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಸ್ತನ ಮತ್ತು ಬಾಯಿಯ ಕ್ಯಾನ್ಸರ್ ಸೇರಿದಂತೆ ಮೂರು ರೀತಿಯ ಕ್ಯಾನ್ಸರ್ಗಳ ಜೊತೆಗೆ 13 ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸಲಾಗುವುದು. ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ಆರೋಗ್ಯ ಸೇವೆಯನ್ನು ಕೈಗೆಟುಕುವ ರೀತಿಯಲ್ಲಿ ಕಲ್ಪಿಸಲು ವಿವಿಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.