ಹುಬ್ಬಳ್ಳಿ: ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬಸವರಾಜ್ ಹೊರಟ್ಟಿ ಅವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಕೆಂಚಪ್ಪ ಗಾಯಾಳು.
ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.