ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಸೇರಿದಂತೆ ಒಂದು ಸಾವಿರ ರೂಪಾಯಿ ಮೌಲ್ಯದ ಕಾಳಜಿ ಕಿಟ್ ಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸರ್ಕಾರ ಆರಂಭಿಸಿದ ಪರಿಹಾರ ಕೇಂದ್ರಗಳಲ್ಲಿ ಇರುವವರು ಮತ್ತು ಇಲ್ಲದವರಿಗೆ ಕೂಡ ಕಿಟ್ ವಿತರಿಸಲಾಗುವುದು. ಸರ್ಕಾರದ ಪರಿಹಾರ ಕೇಂದ್ರಗಳಲ್ಲಿ ಉಳಿದುಕೊಳ್ಳುವ ಬದಲು ಹಲವರು ತಮ್ಮ ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಉಳಿದುಕೊಳ್ಳುತ್ತಾರೆ. ಅವರಿಗೂ ಕೂಡ ಕಾಳಜಿ ಕಿಟ್ ಗಳನ್ನು ನೀಡಲಾಗುವುದು. ಇವುಗಳಲ್ಲಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಸೇರಿದಂತೆ ದಿನೋಪಯೋಗಿ ವಸ್ತುಗಳು ಇರುತ್ತವೆ. 10 ದಿನಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲಾಗುವುದು. ಸರ್ಕಾರದ ಪರಿಹಾರ ಕೇಂದ್ರಗಳಲ್ಲಿ ಉಳಿದುಕೊಂಡು ಮನೆಗೆ ಮರಳುವವರಿಗೂ ಕೂಡ ಕಿಟ್ ನೀಡಲಾಗುವುದು ಎಂದು ಹೇಳಿದರು.