alex Certify SHOCKING NEWS: ನೋಡ ನೋಡುತ್ತಿದ್ದಂತೆ ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಓರ್ವ ಸಾವು, ಇಬ್ಬರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನೋಡ ನೋಡುತ್ತಿದ್ದಂತೆ ಹಳ್ಳದಲ್ಲಿ ಕೊಚ್ಚಿ ಹೋದ ಕಾರು; ಓರ್ವ ಸಾವು, ಇಬ್ಬರ ರಕ್ಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ನದಿ ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಕಾರಿನ ಸಮೇತ ಹಳ್ಳದಲ್ಲಿ ಮೂವರು ಕೊಚ್ಚಿ ಹೋದ ಘಟನೆ ನಡೆದಿದೆ.

ಸಂಬಂಧಿಕರ ಮನೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಚಿಕ್ಕಮಗಳೂರಿನ ಎನ್ ಆರ್ ಪುರದಲ್ಲಿ ಕಾರಿನ ಸಮೇತ ಮೂವರು ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ತಕ್ಷಣ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಆದರೆ ಕಾರಿನಲ್ಲಿದ್ದ 51 ವರ್ಷದ ಪ್ರಸನ್ನ ಎಂಬುವವರು ನೀರು ಪಾಲಾಗಿದ್ದಾರೆ. ಭಾರಿ ಮಳೆ ಹಾಗೂ ಹಳ್ಳದಲ್ಲಿ ನೀರಿನ ರಭಸ ಹೆಚ್ಚಿರುವುದರಿಂದ ಪ್ರಸನ್ನ ಅವರ ಶೋಧಕ್ಕೂ ಅಡ್ಡಿಯುಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...