ತುಮಕೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ, ಆಗಸ್ಟ್ 15ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ತುಮಕೂರಿನ ಹಾಲಗೊಂಡನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಗೌಡ, ಬಿಜೆಪಿಯಲ್ಲಿ ಚುನಾವಣೆಗೆ 6-5 ತಿಂಗಳು ಇರುವಾಗಲೂ ಸಿಎಂ ಬದಲಾವಣೆ ಮಾಡಿದ ಉದಾಹರಣೆಗಳಿವೆ. ಆಗಸ್ಟ್ 15ರೊಳಗೆ ಎಲ್ಲವೂ ಸ್ಪಷ್ಟವಾಗಬಹುದು ಎಂಬುದು ನನ್ನ ಅಭಿಪ್ರಾಯ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
2023ಕ್ಕೆ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ನಿಟ್ಟಿನಲ್ಲಿ ಪಕ್ಷದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳು ಆಗುವ ನಿರೀಕ್ಷೆಯಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ. ಅಭಿವೃದ್ಧಿಪರ ಒಳ್ಳೆಯ ಆಡಳಿತ ನೀಡಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.