ಪಿಯುಸಿ ಪಾಸ್ ಆಗಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಗಡಿ ಭದ್ರತಾ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಮತ್ತು ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಪೈಕಿ ನೇಮಕಾತಿ ನಡೆಯುತ್ತಿರುವ 11 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಎಸ್ ಟಿ ವರ್ಗಕ್ಕೆ ಮೀಸಲಿಡಲಾಗಿದೆ.
ಇನ್ನು 312 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈ ಎರಡೂ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕವಾಗಿರುತ್ತದೆ.
ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಟೈಪಿಂಗ್ ಸ್ಪೀಡ್ ಹೊಂದಿರುವುದು ಕಡ್ಡಾಯವಾಗಿದೆ. ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ಪ್ರವೇಶ ಪತ್ರ ಕಳುಹಿಸಿದ ಬಳಿಕ ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ವಿವರಗಳಿಗೆ ಗಡಿ ಭದ್ರತಾ ಪಡೆಯ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.