ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ್ದ ಟ್ವೀಟ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಮೂರನೇ ಮುಖ್ಯಮಂತ್ರಿಯಾದರೂ ಬರಲಿ, ನಾಲ್ಕನೇಯವರಾದರೂ ಬರಲಿ. ಸಿಎಂ ಬದಲಾವಣೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಟ್ವೀಟ್ ಮಾಡಿದವರನ್ನೇ ಹೋಗಿ ಕೇಳಿ……ನಾನಂತೂ ಟ್ವೀಟ್ ಮಾಡಿಲ್ಲ ಎಂದು ಹೇಳಿದರು.