ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ್ ಪೊಲಿಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಗೋಕಾಕ್ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಪರೀಕ್ಷೆ ನಡೆದಿತ್ತು. ಈ ವೇಳೆ ಅಭ್ಯರ್ಥಿಯೋರ್ವ ಸ್ಮಾರ್ಟ್ ವಾಚ್ ಬಳಸಿ ಪರೀಕ್ಷಾ ಅಕ್ರಮ ನಡೆಸಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಗೋಕಾಕ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ಪರೀಕ್ಷೆಯಲ್ಲಿ ಇನ್ನಷ್ಟು ಅಕ್ರಮ ನಡೆದುರುವ ಬಗ್ಗೆಯೂ ಆರೋಪ ಕೇಳಿಬಂದಿದೆ. 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಬಯಲಿಗೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಒಂದೊಂದೇ ಪರೀಕ್ಷಾ ಅಕ್ರಮಗಳು ಹೊರಬರುತ್ತಿದ್ದು, ಇತ್ತೀಚೆಗೆ ನಡೆದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿಯೂ ಭಾರಿ ಅಕ್ರಮ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.